ಚಿಕ್ಕಮಗಳೂರು: ಮಲೆನಾಡಿನಲ್ಲಿ ಧಾರಾಕಾರ ಮಳೆ ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ ಧ್ವಂಸವಾಗಿದೆ.
ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.

