Bengaluru 23°C
Ad

ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿ: ನಾಲ್ವರು ಮೃತ್ಯು

ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರದಲ್ಲಿ ನಡೆದಿದೆ.

ಚಿಕ್ಕಮಗಳೂರು: ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರದಲ್ಲಿ ನಡೆದಿದೆ.

ಮೆಸ್ಕಾಂ ಲಾರಿ- ಓಮ್ನಿ ಡಿಕ್ಕಿಯಾದ ಬಳಿಕ ಹಿಂದಿನಿಂದ ವೇಗವಾಗಿ ಬಂದ ಓಮ್ನಿಗೆ ಆಲ್ಟೋ ಕಾರು ಕೂಡ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ ಹಾಗೂ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿದ್ದ ಮೆಸ್ಕಾಂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಲಾರಿ ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಆಲ್ಟೋ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

Ad
Ad
Nk Channel Final 21 09 2023
Ad