ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಮತ್ತೊಂದು ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾರ್ ಗ್ರಾಮದ ಯುವಕನಿಗೆ ಮಂಗನ ಕಾಯಿಲೆ ದೃಢವಾಗಿದ್ದು, ಸೋಂಕಿತ ಯುವಕನಿಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ ಬಳಿಕ ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.