ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜವನ್ನು ಹಿಡಿದು ದ್ವಿಚಕ್ರ ವಾಹನದಲ್ಲಿ ಓಡಾಡಿರುವ ಘಟನೆ ನಡೆದಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸೋಮವಾರ ಈದ್ ಮಿಲಾದ್ ಹಬ್ಬ ಇದ್ದು, ಇದರ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವುದು ಕಂಡುಬಂದಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದೀಗ ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
Ad