Bengaluru 20°C
Ad

ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಎಫ್ಐಆರ್ ದಾಖಲು

ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು: ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಈತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Ad

ಬೀದಿ ನಾಯಿಗಳ ಜತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಸೆರೆಯಾಗಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ‌ಈ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಕಟ್ಟಿಮನೆ ವಾಸಿ ಶಿವರಾಜ ಎಂದು ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ.

Ad

ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ವಿಡಿಯೋ ಜಯಪುರ‌, ಕೊಪ್ಪ ಭಾಗದಲ್ಲಿ ವೈರಲ್ ಆಗುತ್ತಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Ad

ನವೆಂಬರ್ 9ರಂದು ಕೃತ್ಯದ ಬಗ್ಗೆ ವಿಡಿಯೋ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯದ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸ್ ಕಾನ್ಸ್ಟೇಬಲ್ ದೂರು ನೀಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ವಿವರಿಸಲಾಗಿದೆ.  ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಗುಪ್ತ ವರದಿಗಾಗಿ ಕರ್ತವ್ಯದಲಿರುವಾಗ ಬಾತ್ಮೀದಾರರ ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬ ನಾಯಿಯನ್ನು ಹಿಡಿದುಕೊಂಡು ಅದರೊಂದಿಗೆ ಅಸಭ್ಯ ವರ್ತಿಸುತ್ತಿದ್ದಾನೆ.

Ad

ಬೀದಿ ನಾಯಿಗೆ ಉಪದ್ರವ ಮಾಡುವುದರ ಜತೆ ಪ್ರಾಣಿ ಹಿಂಸೆ ಮಾಡಿರುವುದು ನಿಲ್ದಾಣದಲ್ಲಿರುವ ಜಯಪುರ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅಕ್ಟೋವರ್ 18 ರಂದು ಬೆಳಗಿನ ಜಾವ ಸುಮಾರು 4 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

Ad
Ad
Ad
Nk Channel Final 21 09 2023