ಕೊಪ್ಪ: ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಲಯಾಳಂ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೂಡ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲಿಯೇ, ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕೊಪ್ಪದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿ ಮಹಿಳಾ ಪೇದೆಗಾಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಇಲ್ಲಿನ PSI ಬಸವರಾಜು ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಇದು ಮೊದಲ ಪ್ರಕರಣವಾಗಿದ್ದು, ಇಲಾಖೆಯಲ್ಲಿ ಇಂತಹ ಸಾಕಷ್ಟು ಆರೋಪಗಳಿದ್ದು, ಇನ್ನಷ್ಟು ಬೆಳಕಿಗೆ ಬರುವ ಸಾಧ್ಯತೆಗಳಿವೆ.
Ad