Bengaluru 22°C
Ad

ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯನ್ನೂ ಗಂಭೀರವಾಗಿ ಎದುರಿಸಬೇಕು: ಡಾ. ಕೆ.ಪಿ ಅಂಶುಮಂತ್

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಿಂದ ಬರುತ್ತಿರುವ ವರದಿಗಳು, ಸಾರ್ವಜನಿಕರ ಅಭಿಪ್ರಾಯದ ಪ್ರಕಾರ ಜಯಪ್ರಕಾಶ ಹೆಗಡೆ ಅವರು ಗೆಲ್ಲುವುದು ನಿಶ್ಚಿತ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷಡಾ. ಕೆ.ಪಿ ಅಂಶುಮಂತ್ ತಿಳಿಸಿದರು.

ಚಿಕ್ಕಮಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಿಂದ ಬರುತ್ತಿರುವ ವರದಿಗಳು, ಸಾರ್ವಜನಿಕರ ಅಭಿಪ್ರಾಯದ ಪ್ರಕಾರ ಜಯಪ್ರಕಾಶ ಹೆಗಡೆ ಅವರು ಗೆಲ್ಲುವುದು ನಿಶ್ಚಿತ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷಡಾ. ಕೆ.ಪಿ ಅಂಶುಮಂತ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಲೋಕಸಭೆ ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನೆ ಮತ್ತು ವಿಧಾನ ಪರಿಷತ್‌ ಚುನಾವಣೆ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಎಲ್ಲಾ ಶಾಸಕರು, ಕಾರ್ಯಕರ್ತರು, ಮುಖಂಡರು ನಮ್ಮದೇ ಚುನಾವಣೆ ಎಂದು ಭಾವಿಸಿ ಕೆಲಸ ಮಾಡಿದ್ದಾರೆ. ಫಲಿತಾಂಶದ ನಂತರ ಪಕ್ಷವನ್ನು ಹೇಗೆ ಕಟ್ಟಬೇಕುಎಂದು ಸಮಾಲೋಚನೆ ನಡೆದಿದೆ.

ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯನ್ನೂ ಗಂಭೀರವಾಗಿ ಎದುರಿಸಬೇಕು ಎನ್ನುವ ಸಂದೇಶವನ್ನು ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ಬ್ಲಾಕ್‌ ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳ ಸಭೆ ನಡೆಸಿ ಅವರಿಗೆ ಸೂಕ್ತ ಮಾರ್ಗದರ್ಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಪರಚುನಾವಣಾ ಪ್ರಚಾರಕಾರ್ಯ ಈ ಬಾರಿ ಬಹಳ ಚೆನ್ನಾಗಿ ನಡೆದಿದೆ. ಎಲ್ಲಕಾರ್ಯಕರ್ತರುತೃಪ್ತಿಯಿಂದ ಕೆಲಸ ಮಾಡಿದ್ದಾರೆ.ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ಸಂಸದೀಯ ಪಟುವಾಗಿದ್ದಾರೆ ಈ ಕಾರಣಕ್ಕೆ ಅವರು ಸಂಸತ್‌ಗೆ ಹೋಗಬೇಕಾದ ಅಗತ್ಯವಿದೆ ಎಂದರು.

ಈ ಬಾರಿ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕೆ.ಕೆ.ಮಂಜುನಾಥ್‌ ಕುಮಾರ್ ಮತ್ತು ಆಯನೂರು ಮಂಜುನಾಥ್ ಸ್ಪರ್ಧಿಸಿದ್ದಾರೆ.

ಎಲ್ಲಾ ಪದವೀಧರರಿಗೆ ಕಾಂಗ್ರೆಸ್ ಸರ್ಕಾರ ಉದ್ಯೋಗ ಸಿಗುವವರೆಗೆ ಯುವನಿಧಿ ಜಾರಿಗೆ ತಂದಿದೆ. ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದರಿಂದ ಈ ಚುನಾವಣೆಯೂ ನಮ್ಮ ಗೆಲುವಿಗೆ ಪೂರಕವಾಗಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕಾರ್ಯಕರ್ತರನ್ನು ಮರೆತರೆ ರಾಜಕಾರಣದಲ್ಲಿರಲು ಸಾಧ್ಯವಿಲ್ಲ. ನಮ್ಮೊಂದಿಗೆ ಕಾರ್ಯಕರ್ತರೂ ಬೆಳೆಯಬೇಕು. ಎರಡನೇ ಹಂತದ ನಾಯಕರುಗಳನ್ನು ಬೆಳೆಸುವ ಕಾರ್ಯವನ್ನು ನಾವು ಮಾಡಬೇಕಿದೆಎಂದು ಕಿವಿಮಾತು ಹೇಳಿದರು.

ಮೇ ೨೮ ರಿಂದಜೂನ್ ೩ ರ ವರೆಗೆಕಾರ್ಯಕರ್ತರು ಕ್ರಿಯಾಶೀಲವಾಗಿ ಶಿಕ್ಷಕರನ್ನು ಸಂಪರ್ಕಿಸಿ ಮನವೊಲಿಸಬೇಕು. ವಿಧಾನ ಪರಿಷತ್ತಿನಲ್ಲಿ ನಮ್ಮ ಸಂಖ್ಯೆ ಹೆಚ್ಚಾಗಬೇಕು. ವಿಧಾನ ಸಭೆಯಲ್ಲಿ ಪಾಸ್‌ಆದ ಬಿಲ್‌ಗಳು ಪರಿಷತ್ತಿಗೆ ಬಂದಾಗ ಸೋಲು ಕಾಣಬಾರದು. ನಮ್ಮ ಸಂಖ್ಯೆ ಹೆಚ್ಚಿದ್ದರೆ ಸರ್ಕಾರಕ್ಕೆ ಮುಜುಗುರವಾಗುವುದನ್ನು ತಪ್ಪಿಸಬಹುದು ಎಂದರು.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ವಿಧಾನ ಪರಿಷತ್‌ಚುನಾವಣೆ ನಂತರ ಪ್ರತಿ ಪಂಚಾಯ್ತಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆಗಾಯತ್ರಿ ಶಾಂತೇಗೌಡ, ಜಿಲ್ಲಾಕಾಂಗ್ರೆಸ್ ಮಾಜಿಅಧ್ಯಕ್ಷಡಾ. ಡಿ.ಎಲ್.ವಿಜಯಕುಮಾರ್, ಕೆಪಿಸಿಸಿ ವಕ್ತಾರಎಚ್.ಎಚ್.ದೇವರಾಜ್, ಬ್ಲಾಕ್ ಅಧ್ಯಕ್ಷರುಗಳಾದ ಹೆಚ್.ಪಿ ಮಂಜೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ ಇತರರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad