Bengaluru 22°C
Ad

ಮುಳ್ಳಯ್ಯನಗಿರಿ, ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ!

ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಸೌಂದರ್ಯ ದುಪಟ್ಟಾಗಿರುತ್ತದೆ.

ಚಿಕ್ಕಮಗಳೂರು: ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಸೌಂದರ್ಯ ದುಪಟ್ಟಾಗಿರುತ್ತದೆ.

ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

 

Ad
Ad
Nk Channel Final 21 09 2023
Ad