Bengaluru 22°C
Ad

ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ!

ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.

ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.

ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ್ದು, ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

Ad
Ad
Nk Channel Final 21 09 2023