ಚಿಕ್ಕಮಗಳೂರು : ಕಾಡಾನೆ ದಾಳಿಗೆ ವ್ಯಕ್ತಿಗಳಿಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕಾಡಾನೆ ದಾಳಿ ನಡೆಸಿದ್ದು ಈ ದಾಳಿಯಿಂದಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮುಡುಬಾ ಎಲ್ಸಾರ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದ್ದು, ಮೃತಪಟ್ಟ ಇಬ್ಬರು ದುರ್ದೈವಿಗಳು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು ಎನ್ನಲಾಗಿದೆ.

ಏಕಾಏಕಿ ಎರಗಿದ ಕಾಡಾನೆ ಕೆಲವೇ ಕ್ಷಣದಲ್ಲಿ ದಾಳಿ ಮಾಡಿ ಇಬ್ಬರ ಜೀವಕ್ಕೆ ಸಂಚಾಕಾರ ತಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ವ್ಯಾಪಕ ಆಕ್ರೋಶ ಹೊರಹಾಕಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಬಂದು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿದ್ದಾರೆ.