Bengaluru 17°C

ಚಿತ್ರದುರ್ಗದಲ್ಲಿ ಸಿಡಿಲು ಬಡಿದು 106 ಕುರಿಗಳು ಮೃತ್ಯು

ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.


ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ ಆಂಜನೇಯ ಎಂಬ ಕುರಿಗಾಹಿಯ 90 ಹಾಗೂ ಓಬಣ್ಣ ಎಂಬವರ 16 ಕುರಿಗಳು ಸೇರಿದಂತೆ ಒಟ್ಟು 106 ಕುರಿಗಳು ಸಿಡಿಲಿಗೆ ಬಲಿಯಾಗಿವೆ.


ಈ ಘಟನೆಯಿಂದಾಗಿ ಕುರಿಗಾಹಿಗಳಿಗೆ ಅಪಾರ ನಷ್ಟವಾಗಿದೆ. ಜೀವನೋಪಾಯಕ್ಕೆ ದಾರಿಯಾಗಿದ್ದ ಕುರಿಗಳ ಸಾವಿನಿಂದಾಗಿ ಕುರಿಗಾಹಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು.


ಈ ವಿಷಯ ತಿಳಿದ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅಲ್ಲದೇ ಅನುಗ್ರಹ ಯೋಜನೆಯಡಿ ರೈತರಿಗೆ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಹಾಯಕ ನಿರ್ದೇಶಕ ಡಾ.ರೇವಣ್ಣ ಭರವಸೆ ನೀಡಿದ್ದಾರೆ.


ಗ್ರಾಮಕ್ಕೆ ತಹಶೀಲ್ದಾರ್ ರೇಹಾನ್ ಪಾಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುರಿಗಾಹಿಗಳ ಅಳಲು ಆಲಿಸಿದರು. ನೊಂದ ಕುರಿಗಾಹಿಗಳ ಪರ ಸರ್ಕಾರಕ್ಕೆ ವರದಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.


Nk Channel Final 21 09 2023