Bengaluru 28°C
Ad

ಕ್ಲೊರಿನ್ ಗ್ಯಾಸ್ ಸೋರಿಕೆ: 20ಕ್ಕೂ ಹೆಚ್ಚು ಜನ ಅಸ್ವಸ್ಥ

ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಅವಘಡ ಸಂಭವಿಸಿದೆ.

ಚಿತ್ರದುರ್ಗ: ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಅವಘಡ ಸಂಭವಿಸಿದೆ.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Ad
Ad
Nk Channel Final 21 09 2023