ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗ್ರಾಮದ ನಿವಾಸಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆಯಲ್ಲಿ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆಗೆ ಬೆಂಕಿ ವ್ಯಾಪಿಸಿದ್ದು, ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಬೆಲೆಬಾಳುವ ಚಿನ್ನಾಭರಣ ಹಾಗೂ ಸಂಗ್ರಹಿಸಿಡಲಾಗಿದ್ದ ದವಸ ಧಾನ್ಯಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೇಹಾನ್ ಪಾಷಾ, ಹಾನಿಯ ಕುರಿತು ಪರಿಶೀಲನೆ ನಡೆಸಿದ್ದಾರೆ.