Bengaluru 24°C
Ad

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ: ಇಬ್ಬರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಳವಿಬಾಗಿ ಬಳಿ ನಡೆದಿದೆ.

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಳವಿಬಾಗಿ ಬಳಿ ನಡೆದಿದೆ.

ವಿಶಾಲಾಕ್ಷಮ್ಮ (75), ನಾಗರಾಜ್ ಶೆಟ್ಟಿ (55) ಮೃತ ದುರ್ದೈವಿಗಳು. ಮೃತಪಟ್ಟ ಇಬ್ಬರು ತುಮಕೂರು ಮೂಲದವರು. ಮೃತ ನಾಗರಾಜ್ ಶೆಟ್ಟಿ ಮಗಳನ್ನ ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ PSI ಮಾರುತಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad