Ad

ಕಾರಿಗೆ ಲಾರಿ ಡಿಕ್ಕಿ: ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತ್ಯು

ಕಾರಿಗೆ ಹಿಂಬದಿಯಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

ಚಿತ್ರದುರ್ಗ : ಕಾರಿಗೆ ಹಿಂಬದಿಯಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

Ad
300x250 2

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ.

ಲಾರಿ ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲಿ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad
Ad
Nk Channel Final 21 09 2023
Ad