ಚಿತ್ರದುರ್ಗ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರಿದಿದ್ದು, ಇತ್ತ ಕೋಟೆನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಾಸನ ಮೂಲದ ವಿದ್ಯಾರ್ಥಿ ಮನೋಜ್(22) ಸಾವಿಗೆ ಶರಣಾಗಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಮನೋಜ್ ಸಾವನ್ನಪ್ಪಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜಿನ 2ನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮನೋಜ್ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821