ಚಿತ್ರದುರ್ಗ : ಖಾಸಗಿ ಶಾಲೆ ಸಿಮೆಂಟ್ ಸ್ಟೇಜ್ ಕುಸಿದು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗದ ಹೊರಪೇಟೆ ಕ್ರೇಸೆಂಟ್ ಶಾಲೆಯಲ್ಲಿ ನಡೆದಿದೆ.
ಗಾಯಗಳು ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚರಂಡಿ ಮೇಲೆ ಶಾಲೆಯ ಸ್ಟೇಜ್ ನಿರ್ಮಾಣ ಹಿನ್ನೆಲೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಜೀಯಾ, ಕಾವ್ಯ, ಫಾತಿಮಾ, ನಿಶ್ಚತ್ ಸೇರಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ. ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

