Ad

ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ತಂದೆಗೆ ಹಾರ್ಟ್ ಅಟ್ಯಾಕ್

Chitra

ಚಿತ್ರದುರ್ಗ: ರೇಣುಕಾಸ್ವಾಮಿ ಮರ್ಡರ್ ಕೇಸ್​ನಲ್ಲಿ ನಟ ದರ್ಶನ್​ ಹಾಗೂ ಗ್ಯಾಂಗ್​ ಕೂಡ ತಗಲಾಕಿಕೊಂಡಿದ್ದಾರೆ. ಚಿತ್ರದುರ್ಗ ಮೂಲಕ ಆರೋಪಿ ಅನು ಕೂಡ ಹತ್ತರೊಟ್ಟಿಗೆ ಹನ್ನೊಂದು ಎಂಬಂತೆ ಅರೆಸ್ಟ್​ ಆಗಿದ್ದು ಪೊಲೀಸರ ವಶದಲ್ಲಿದ್ದಾರೆ. ಇತ್ತ ಬಂಧಿತ ಆರೋಪಿಯ ಕುಟುಂಬ ಕಣ್ಣೀರ ಕಡಲಲ್ಲಿ ಮುಳುಗಿದೆ. ಆದರೆ ಇದರ ಮಧ್ಯೆ ಆರೋಪಿ ಅನು ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Ad
300x250 2

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ A7 ಅನು@ ಅನು ಕುಮಾರ್ ಚಿತ್ರದುರ್ಗ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಆದರೆ ಇತ್ತ ಆರೋಪಿ ಅನು ತಂದೆ ಚಂದ್ರಣ್ಣ (60) ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಚಿತ್ರದುರ್ಗದ ಸಿಹಿನೀರು ಹೊಂಡ ರಸ್ತೆಯ ಬಳಿಯಿರುವ ಮನೆ ಬಳಿ ಏಕಾಏಕಿ ಕುಸಿದು ಬಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಮಗ ಅನು ಬಂಧನದಿಂದ ತಂದೆ ಖಿನ್ನತೆಗೆ ಒಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅನು@ ಅನು ಕುಮಾರ್ ಕಳೆದ ಮೂರು ವರ್ಷದಿಂದ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು, ಸಭ್ಯ ಹುಡುಗನಾಗಿದ್ದು ಅಕ್ಕನ ಮದುವೆ ಕೂಡ ಮಾಡಿದ್ದನು. ಆದರೆ ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರನ ಮಾತಿಗೆ ಮರುಳಾಗಿ ಇದೀಗ ಪೊಲೀಸರ ವಶದಲ್ಲಿದ್ದಾನೆ.

Ad
Ad
Nk Channel Final 21 09 2023
Ad