ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಸರೋಜಬಾಯಿ ಕಲ್ಯಾಣ ಮಂಟಪದ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಟ್ಯಾಂಕರ್ ಚಿತ್ರದುರ್ಗದಿಂದ ಬೆಳಗಾವಿಗೆ ಸ್ಪಿರಿಟ್ ತರುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಘಟನೆ ವೇಳೆ ಟ್ಯಾಂಕರ್‌ನಲ್ಲಿದ್ದ ಚಾಲಕ, ನಿರ್ವಾಹಕ ಬೆಂಕಿಯಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
Ad