ಚಿತ್ರದುರ್ಗ: ಎಸ್​ಎಸ್​ಎಲ್​ಸಿ ಓದುತ್ತಿದ್ದ ವಿದ್ಯಾರ್ಥಿಯೊರ್ವ ಮನೆಯಲ್ಲಿ ಮಫ್ಲರ್​ನಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರಂಗಾಪುರ ಗ್ರಾಮದ ಚಂದ್ರಶೇಖರ್ ಎನ್ನುವರ ಮಗ ಪ್ರಜ್ವಲ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹೊಳಲ್ಕೆರೆಯ ವಾಗ್ದೇವಿ ಶಾಲೆಯಲ್ಲಿ ವಿದ್ಯಾರ್ಥಿ 10ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿದ್ದನು. ಇತ್ತೀಚೆಗೆ ಶಾಲೆಯಲ್ಲಿ ನಡೆಸಲಾಗಿದ್ದ ತರಗತಿ ಪರೀಕ್ಷೆಗೆ ಬಾಲಕ ಹಾಜರಾಗಿರಲಿಲ್ಲ. ಹೀಗಾಗಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಿಕ್ಷಕರು ಬಾಲಕನಿಗೆ ಸೂಚಿಸಿದ್ದರು.

ಅದರಂತೆ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿ ಓದಿಕೊಳ್ಳುತ್ತೇನೆ ಪೋಷಕರಿಗೆ ಎಂದು ಹೇಳಿ ಮಾಫ್ಲರ್​ನಿಂದ ನೇಣು ಬಿಗಿದುಕೊಂಡಿದ್ದಾನೆ. ಇನ್ನು ಈ ಸಂಬಂಧ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.