ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28), ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಗೋವಾಕ್ಕೆ ಫಾರ್ಚುನರ್ ಕಾರಿನಲ್ಲಿ ತೆರೆಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಮಗು ಹಾಗೂ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಹಾಗೂ ಈ ಭೀಕರ ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

