Ad

ರಸ್ತೆ ದಾಟುತ್ತಿದ್ದ ವಿಶೇಷ ಚೇತನ ವ್ಯಕ್ತಿ ಮೇಲೆ ಹರಿದ ಲಾರಿ; ಅಘಾತಕಾರಿ ದೃಶ್ಯ ಸೆರೆ

Citradurga

ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ವಿಶೇಷ ಚೇತನ ವ್ಯಕ್ತಿ ಮೇಲೆ ಲಾರಿ ಹರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ| ಟಿ.ನುಲೇನೂರು ಗೇಟ್ ಬಳಿ ನಡೆದಿದೆ. ಪರಿಣಾಮ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪಿದ್ದಾರೆ.

ಮಲ್ಲಿಕಾರ್ಜುನ್ (52) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತಿರುಮಲಾಪುರ ಗ್ರಾಮದ ನಿವಾಸಿಯಾಗಿದ್ದು, ರಸ್ತೆ ದಾಟುವ ವೇಳೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಲಾರಿ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿತ್ರಹಳ್ಳಿ PSI ಕಾಂತರಾಜ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

https://x.com/HAchrappady/status/1819583249976267103

 

Ad
Ad
Nk Channel Final 21 09 2023