ಟಿ.ನರಸೀಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ಸಂಗಮ ಹಾಗೂ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್,ಯೂತ್ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕರಾದ ಎ.ಬಿ.ನಾಗೇಂದ್ರ ಪ್ರಸಾದ್ ದೀಪ ಬೆಳಗಿಸಿ ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿನ ಕಾಲೇಜಿನ ಫಲಿತಾಂಶವನ್ವು ಬೀಟ್ ಮಾಡುವ ಶಕ್ತಿ ನಿಮ್ಮಲ್ಲಿ ಮಾತ್ರ ಇದೆ. ವಿದ್ಯೆಯನ್ನು ಕಲಿಯುವ ಸಂದರ್ಭದಲ್ಲಿ ನಮ್ಮ ಏಕಾಗ್ರತೆಯನ್ನು ಅದಕ್ಕೆ ಮಾತ್ರ ಮೀಸಲಿರಿಸಬೇಕು. ಐಎಎಸ್, ಐಪಿಎಸ್ ಪರೀಕ್ಷೆಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಕೀಳರಿಮೆ ಬಿಟ್ಟು ಸಾಧನೆಯ ಕಡೆ ಗಮನ ನೀಡಿ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕದ ಉತ್ತಮ ಸ್ವಯಂ ಸೇವಕ ಪ್ರಶಸ್ತಿ ಪಡೆದಿರುವ ಬಿಎ ಎರಡನೇ ವರ್ಷದ ವಿದ್ಯಾರ್ಥಿ ಮಹದೇವಸ್ವಾಮಿರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಹೆಳವರಹುಂಡಿ ಸಿದ್ದಪ್ಪ, ಕ್ರೀಡಾ ಸಮಿತಿ ಸಂಚಾಲಕರು ಹಾಗೂ ಪ್ರಾಂಶುಪಾಲರಾದ ಡಾ.ಹೆಚ್.ವಿ.ಉದಯಕುಮಾರ್,
ರಾಘವೇಂದ್ರ ಪ್ರಸಾದ್, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಪ್ರೊ.ಜಿ.ಎಸ್.ದೇವರಾಜೇಗೌಡ, ಡಾ.ಪುಟ್ಟಸ್ವಾಮಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಚಾಲಕರಾದ ಡಾ.ಮುತ್ತಮ್ಮ,ಪ್ರೊ.ಮಹೇಶ್, ಐಕ್ಯೂಎಸಿ ಸಂಚಾಲಕರಾದ ಡಾ.ಅಮಿತ್, ಡಾ.ರೇಷ್ಮಚೆಂಗಪ್ಪ,ರಾಷ್ಟ್ರೀಯ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಡಾ.ಕೆಂಪರಾಜು, ಡಾ.ಕವಿತಾ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

