Bengaluru 28°C
Ad

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಗೆ ಬಿಗ್ ಶಾಕ್

Cm (2)

ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು.

ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಸಿಎಂ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ ನೀಡಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಸೂಚನೆ ನೀಡಿದ್ದಾರೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈ ಮೂಲಕ  ಸಿಎಂ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಆರ್​ಪಿಸಿ ಕಾಯ್ದೆ ಉಲ್ಲೇಖಿಸಿ ತೀರ್ಪು ನೀಡಿದೆ.

Ad
Ad
Nk Channel Final 21 09 2023