News Karnataka Kannada
Monday, May 06 2024
ಕರ್ನಾಟಕ

ಅಕ್ಕಿ ಪೂರೈಕೆ ವಿಚಾರದಲ್ಲಿ ಕಾಂಗ್ರೆಸ್‌- ಬಿಜೆಪಿ ಜಟಾಪಟಿ: ಇಂದು ಪ್ರತಿಭಟನೆ

Congress Bjp Mix
Photo Credit :

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಕಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು (ಜೂ.20) ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಲಿದೆ.
ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಇದರಲ್ಲಿ ಜನಪ್ರತಿನಿಧಿಗಳು, ಸಾವಿರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಜಿಲ್ಲಾ ಕೇಂದ್ರಗಳಲ್ಲೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಮಟ್ಟದ ಹೋರಾಟದ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಿಗೆ ವಹಿಸಲಾಗಿದೆ.

ಬಿಜೆಪಿಯಿಂದಲೂ ಪ್ರತಿಭಟನೆ: ಇತ್ತ ಜು.1ರಿಂದ ಅಕ್ಕಿ ನೀಡದಿದ್ದರೆ ಜನತೆ ಸುಮ್ಮನಿರುವುದಿಲ್ಲ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಗ್ಯಾರಂಟಿ ಯೋಜನೆಯಡಿ ಬಡವರಿಗೆ 10 ಕೆ.ಜಿ. ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ಗೆ ಪ್ರತಿಯಾಗಿ ಬಿಜೆಪಿ ಸಹ ಇಂದು(ಮಂಗಳವಾರ) ಪ್ರತಿಭಟನೆಗೆ ಮುಂದಾಗಿದೆ. ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಒಟ್ಟು ಮೂರು ಹಂತದಲ್ಲಿ ಹೋರಾಟ ಹಮ್ಮಿಕೊಂಡಿದೆ. ಈ ಪೈಕಿ ಮೊದಲ ಹಂತವಾಗಿ ಬಿಜೆಪಿ ವತಿಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಹತ್ತು ಸಂಘಟನಾತ್ಮಕ ವಿಭಾಗ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು