ಬಿಜಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಾಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆಯ ಮಂತ್ರಿ ಡಿ.ಕೆ. ಶಿವಕುಮಾರ್, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ,

ಜ (1)

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಮುಖ್ಯ ಇಂಜಿನಿಯರ್ ಹೆಚ್.ಎನ್. ಶ್ರೀನಿವಾಸ್, ಬಿಜಾಪುರ ಜಿಲ್ಲಾ ಉಸ್ತುವಾರಿ ಮಂತ್ರಿ ಡಾ. ಎಂ.ಬಿ. ಪಾಟೀಲ್, ಬಿಜಾಪುರ ಜಿಲ್ಲಾಧಿಕಾರಿ ಟಿ‌. ಭೂಬಲನ, ಬಿಜಾಪುರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೋನಾವಾನೆ ರಿಷಿಕೇಶ್ ಭಗವಾನ್, ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಬಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.