ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ.

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮಗುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್ ಸೋಂಕು ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.

ಕೊರೊನಾ ಸೋಂಕಿನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ. ಸದ್ಯಕ್ಕೆ ವಿಶೆಷವಾಗಿ ಹೇಳುಂತದ್ದು ಏನೂ ಇಲ್ಲ. ಕೇಂದ್ರ ಸರ್ಕಾರ ಸಹ ಇದು ಅಪಾಯಕಾರಿ ಏನಲ್ಲ ಎಂದು ಸಂದೇಶ ನೀಡಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಹಾಗಾಗಿ ಜನ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.