ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನಾಟವನ್ನು ಶುರು ಮಾಡಿದೆ. ಮತ್ತೆ ಜನರನ್ನು ಭಯದ ವಾತಾವರಣದತ್ತ ಕೊಂಡೊಯ್ಯುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ರಾಜ್ಯದಲ್ಲಿಂದು 24 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್ ಕೇಸ್ ಪತ್ತೆಯಾಗಿದೆ. 24 ಗಂಟೆಯಲ್ಲಿ 2, 263 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.
ದಿನೇದಿನೇ ಕೋವಿಡ್ ಸಂಖ್ಯೆ ಏರಿಕೆಯಾಗುತ್ತಿದೆ. ಸದ್ಯ ಕೊರೊನಾದಿಂದ 11 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆದರೆ 9 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮತ್ತೆ ಇಬ್ಬರು ಸೋಂಕಿತರು ಐಸಿಯುಗೆ ದಾಖಲಾಗಿದ್ದಾರೆ.
ಒಟ್ಟಿನಲ್ಲಿ ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ 1.06 ಪರ್ಸೆಂಟ್ಗೆ ಏರಿಕೆಯಾಗಿದೆ.