ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಆದೇಶವನ್ನು ಕೋರ್ಟ್ ಇಂದು ಪ್ರಕಟಿಸಿದೆ.
ಸೂರಜ್ ರೇವಣ್ಣ ಯಾವುದೇ ರೀತಿಯಲ್ಲಿ ಸಂತ್ರಸ್ತೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು, ತಿಂಗಳ ಪ್ರತಿ ಎರಡನೇ ಭಾನುವಾರ ಮತ್ತು ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಅವರ ಹಾಜರಾತಿ ಹಾಕುವುದು.6 ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ (ಯಾವುದು ಮೊದಲು) ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು ಎಂದು ಷರತ್ತುಗಳನ್ನು ವಿಧಿಸಿದೆ.

