Bengaluru 17°C

ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ : ಕೇಸ್‌ಗೆ ಸಿಕ್ತು ಬಿಗ್‌ ಟ್ವಿಸ್ಟ್‌

ರೇಣುಕಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಸೇರಿದಂತೆ ಒಟ್ಟು 17 ಮಂದಿ ಜೈಲು ಪಾಲಾಗಿದ್ದಾರೆ. ಈ ಕೊಲೆ ಕೇಸ್‌ ಸಂಬಂಧ ಸಾಕ್ಷ್ಯಗಳ ಹುಡುಕಾಟ ನಡೆಸಲಾಗಿತ್ತು ಇದೀಗ  ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಸೇರಿದಂತೆ ಒಟ್ಟು 17 ಮಂದಿ ಜೈಲು ಪಾಲಾಗಿದ್ದಾರೆ. ಈ ಕೊಲೆ ಕೇಸ್‌ ಸಂಬಂಧ ಸಾಕ್ಷ್ಯಗಳ ಹುಡುಕಾಟ ನಡೆಸಲಾಗಿತ್ತು ಇದೀಗ  ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ.ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.


ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.


Nk Channel Final 21 09 2023