ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್‌ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಎರಡೂ ಕೋಮಿನ ಧ್ವಜಗಳನ್ನು ತೆರವುಗೊಳಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಲಾಗಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ವಾಗ್ವಾದ ಮಾಡಿಕೊಂಡಿದ್ದ ಎರಡೂ ಕೋಮಿನವರ ಕಡೆಯಿಂದ ಒಟ್ಟು ಎಂಟು ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಘಟನೆ ಕುರಿತು ಯಾರೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಬಾರದು. ಒಂದು ವೇಳೆ ಸುಳ್ಳು ಸುದ್ದಿ ಹಬ್ಬಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.