Bengaluru 23°C
Ad

ಕಾಂಪಿಟೇಟಿವ್ ಎಕ್ಸಾo ಟ್ರೈನಿಂಗ್ ಸೆಂಟರ್ ಮಾಲೀಕ ಆತ್ಮಹತ್ಯೆ

ದಾವಣಗೆರೆ ಯಲ್ಲಿ ಕಾಂಪಿಟೇಟಿವ್ ಎಕ್ಸಾಂ ಟ್ರೈನಿಂಗ್ ಸೆಂಟರ್ ಮಾಲೀಕ ಸ್ವಗೃಹದಲ್ಲಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾರೆ.

ದಾವಣಗೆರೆ : ದಾವಣಗೆರೆ ಯಲ್ಲಿ ಕಾಂಪಿಟೇಟಿವ್ ಎಕ್ಸಾಂ ಟ್ರೈನಿಂಗ್ ಸೆಂಟರ್ ಮಾಲೀಕ ಸ್ವಗೃಹದಲ್ಲಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾರೆ.

Ad

‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ಶುಕ್ರವಾರ ಸ್ವಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್‌ಜಿ.ಎನ್ (34) ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

Ad

ಸ್ಪರ್ಧಾತ್ಮಕ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ ಶರತ್, ಇತ್ತೀಚಿಗೆ ರಾಜಕೀಯದಲ್ಲಿ ಹೆಚ್ಚಿನ ಒಲವು ವ್ಯಕ್ತ ಪಡಿಸಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಲೋಕಸಭೆ ಎಲೆಕ್ಷನ್ ನಲ್ಲಿ ಪ್ರಚಾರ ಕೂಡ ನಡೆಸಿದ್ದರು. ಇದೀಗ ಧಿಡೀರ್ ನೇಣಿಗೆ ಶರಣಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Ad

ಶರತ್ ಹತ್ತಾರು ಕಡೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಸಂಸ್ಥೆಗಳನ್ನ ಕೂಡ ಆರಂಭಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಯ ಕಾರಣ ನಿಗೂಢವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

Ad
Ad
Ad
Nk Channel Final 21 09 2023