Bengaluru 29°C
Ad

ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ : ಡೆತ್‌ನೋಟ್‌ ಬರೆದಿಟ್ಟು ಕಂಟ್ರಾಕ್ಟರ್‌ ಆತ್ಮಹತ್ಯೆ

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ:  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರಿನ ಕಂಟ್ರಾಕ್ಟರ್ ಪಿ.ಎಸ್ ಗೌಡರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ನಿಂದ ತಮಗೆ ಬಾಕಿ ಬಿಲ್ ಪಾವತಿ ಮಾಡದೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಕೆಆರ್‌ಡಿಎಲ್ ಅಧಿಕಾರಿಗಳ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಗೌಡರ್‌, ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದರಲ್ಲದೆ, ಕೆಆರ್‌ಐಡಿಎಲ್ ಸಂಸ್ಥೆಯಿಂದ ದೊಡ್ಡ ಮೊತ್ತದ ಪರಿಹಾರ ನೀಡುವಂತೆ ಆಗ್ರಹಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಅವರ ಇಬ್ಬರು ಸಹೋದರರ ಮೇಲೂ ಹಣಕಾಸಿನ ವಿಚಾರದಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ತನ್ನ ಸಹೋದರ ಶ್ರೀನಿವಾಸ್, ತನ್ನ ಮೇಲೆ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದೂ ದೂರಿದ್ದಾರೆ.

ಈ ಕುರಿತು ಪಿ.ಎಸ್ ಗೌಡರ್ ಪತ್ನಿ ವಸಂತ ಕುಮಾರಿಯವರಿಂದ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸಂತೇಬೆನ್ನೂರಿನ ಪೊಲೀಸ್ ಠಾಣೆಯಲ್ಲಿ 306 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Ad
Ad
Nk Channel Final 21 09 2023
Ad