ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಇಂದು ನಡೆದ ಬಿ.ಕಾಂ ನ ಇ- ಕಾಮರ್ಸ್ ಪರೀಕ್ಷೆಯಲ್ಲಿ ಎಡವಟ್ಟಾಗಿದ್ದು, ಪ್ರಶ್ನೆ ಪತ್ರಿಕೆ ಕೊಡುವ ಬದಲು ಉತ್ತರ ಇರುವ ಪೇಪರ್ ಕೊಟ್ಟು ನಿರ್ಲಕ್ಷ್ಯ ಮೆರೆಯಲಾಗಿದೆ. ಆರನೇ ಸೆಮಿಸ್ಟರ್ ವಿಧ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಉತ್ತರ ಇರುವ ಪತ್ರಿಕೆ ನೀಡಿದ್ದಾರೆ. ಇದನ್ನು ನೋಡಿದ ವಿದ್ಯಾರ್ಥಿಗಳು ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದಾರೆ.
ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಉತ್ತರ ಇರುವ ಪತ್ರಿಕೆ ನೀಡಿ ಎಡವಟ್ಟು ಮಾಡಿಕೊಂಡಿದ್ದು, ಪ್ರಶ್ನೆಪತ್ರಿಕೆ ಎಂದು ವಿದ್ಯಾರ್ಥಿಗಳ ಕೈಗೆ ಕೊಟ್ಟ ಬಳಿಕವಷ್ಟೇ ವಿಚಾರ ಗೊತ್ತಾಗಿದೆ.