Bengaluru 22°C
Ad

ನಾನು ಆರೋಗ್ಯವಾಗಿದ್ದೇನೆ ಎಂದು ಸಂದೇಶ ರವಾನಿಸಿದ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ  ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿನ್ನೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. 

ದಾವಣಗೆರೆ: ದಾವಣಗೆರೆ  ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿನ್ನೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಈಗ ನಾನು ಆರೋಗ್ಯವಾಗಿದ್ದೇನೆ  ಎಂದು ಸಂದೇಶ ರವಾನಿಸಿದ್ದು ಅಭಿಮಾನಿಗಳ ಆತಂಕ ಕಡಿಮೆಯಾಗಿದೆ.

ಕಫದ ಸಮಸ್ಯೆ ಉಂಟಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಕುಟುಂಬಸ್ಥರ ಜೊತೆ ನಗುನಗುತ್ತಾ ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ ಜನರಿಗೆ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿದೆ.

Ad
Ad
Nk Channel Final 21 09 2023
Ad