Bengaluru 23°C
Ad

ನೈತಿಕ ಪೊಲೀಸ್ ಗಿರಿ : ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹರಿಹರದ ಕಾಳಿದಾಸ ನಗರದಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ದಾವಣಗೆರೆ: ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹರಿಹರದ ಕಾಳಿದಾಸ ನಗರದಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಯುವಕ ಪರಿ ಪರಿಯಾಗಿ ಬೇಡಿಕೊಂಡರೂ ಬಿಡದೇ ಎಂಟತ್ತು ಜನ ಥಳಿಸಿದ್ದಾರೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎನ್ನಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದಾನೆ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Ad
Ad
Nk Channel Final 21 09 2023
Ad