Bengaluru 21°C
Ad

ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ : 23 ಕಿಡಿಗೇಡಿಗಳ ಸೆರೆ

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಯುವಕನ ಲಾಕಪ್‌ ಡೆತ್‌ ಪ್ರಕರಣ ಖಂಡಿಸಿ, ಠಾಣೆಗೆ ಕಲ್ಲು ತೂರಾಟ ನಡೆಸಿದ್ದ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸದ್ಯ ಬಂಧಿತರಾಗಿರುವ 23 ಆರೋಪಿಗಳಿಗೆ ಚನ್ನಗಿರಿ ನ್ಯಾಯಾಲಯ, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಏನಿದು ಘಟನೆ?
ಆದಿಲ್‌ ಎಂಬ ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು.ಈ ಸಂಬಂಧ ಕಿಡಿಗೇಡಿಗಳನ್ನು ಬಂಧಿಸಲಾಗಿದೆ.

Ad
Ad
Nk Channel Final 21 09 2023
Ad