Bengaluru 23°C
Ad

ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ: ಬಂಧನ ಭೀತಿಯಿಂದ ಗ್ರಾಮ ತೊರೆದ ಜನ

ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹೊನ್ನೆಬಾಗಿ ಗ್ರಾಮದಲ್ಲಿ ಬಹುತೇಕ ಜನರು ಮನೆ ಖಾಲಿ ಮಾಡಿದ್ದಾರೆ.

ದಾವಣಗೆರೆ: ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹೊನ್ನೆಬಾಗಿ ಗ್ರಾಮದಲ್ಲಿ ಬಹುತೇಕ ಜನರು ಮನೆ ಖಾಲಿ ಮಾಡಿದ್ದಾರೆ.

ಈಗಾಗಲೇ 39 ಜನರನ್ನು ಬಂಧನ ಮಾಡಿದ ಬೆನ್ನಲ್ಲೇ ತನ್ನನ್ನು ಬಂಧಿಸಬಹುದು ಎಂಬ ಭೀತಿಯಿಂದ ಕೆಲ ಪುರುಷರು ಗ್ರಾಮವನ್ನೇ ಬಿಟ್ಟು ಹೋಗಿದ್ದಾರೆ. ಕೆಲ ಮನೆಗಳಿಗ ಬೀಗ ಬಿದ್ದಿದೆ.

ಪೊಲೀಸರು ಮತ್ತಷ್ಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾವಿನ ಹಣ್ಣು ವ್ಯಾಪಾರಕ್ಕೆ ತುಮಕೂರಿನ ಗುಬ್ಬಿಗೆ ಹೋಗಿದ್ದ ಸೈಯ್ಯದ್ ತನ್ವೀರ್‌ನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಗಲಾಟೆಗೂ ಆತನಿಗೂ ಸಂಬಂಧ ಇಲ್ಲದಿದ್ದರೂ ಕೂಡ ಬಂಧನ ಮಾಡಿದ್ದಾರೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಕಲ್ಲು ಹೊಡೆದವರನ್ನು ಬಿಟ್ಟು ಕಷ್ಟ ಪಟ್ಟು ದುಡಿಯುತ್ತಿರುವರನ್ನು ಬಂಧನ ಮಾಡಿದ್ದಾರೆ. ದಾಂಧಲೆ ಮಾಡಿದ ಕಿಡಿಗೇಡಿಗಳನ್ನು ಬಂಧನ ಮಾಡಿ, ಆದರೆ ಅಮಾಯಕರಿಗೆ ಕಿರುಕುಳ ನೀಡಿಬೇಡಿ ಎಂದು ಬಂಧನಕ್ಕೆ ಒಳಗಾದ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

Ad
Ad
Nk Channel Final 21 09 2023
Ad