News Karnataka Kannada
Friday, May 03 2024
ಕರ್ನಾಟಕ

ಇನ್ಮುಂದೆ ‘ಮಕ್ಕಳು’ ನಟಿಸಲು ಡಿಸಿ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

State
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರೊಟ್ಟಿಗೆ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಮಕ್ಕಳನ್ನು ಧಾರವಾಹಿ, ಚಲನಚಿತ್ರಗಳಲ್ಲಿ ನಟಿಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದ ನಂತರವೇ ಸಿನಿಮಾ, ಸೀರಿಯಲ್ ಗಳಲ್ಲಿ ನಟಿಸಲು ಅವಕಾಶ ಎಂಬುದಾಗಿ ತಿಳಿಸಿದೆ.

ಒಂದು ದಿನದಲ್ಲಿ 5 ಗಂಟೆಗೂ ಹೆಚ್ಚು ಕಾಲ ಮಕ್ಕಳನ್ನು ನಟಿಸೋದಕ್ಕೆ ಬಳಸಿಕೊಳ್ಳಬಾರದು. ತಿಂಗಳಲ್ಲಿ ಕೇವಲ 27 ದಿನಗಳು ಮಾತ್ರವೇ ಮಕ್ಕಳನ್ನು ಶೂಟಿಂಗ್ ನಲ್ಲಿ ಬಳಿಸಿಕೊಳ್ಳಬೇಕು ಎಂಬುದಾಗಿಯೂ ಷರತ್ತು ವಿಧಿಸಿದೆ.

ಒಂದು ವೇಳೆ ಕಾರ್ಮಿಕ ಇಲಾಖೆಯ ಈ ಆದೇಶ ಪಾಲಿಸದೇ ಮಕ್ಕಳನ್ನು ಸೀರಿಯಲ್, ಸಿನಿಮಾಗಳಲ್ಲಿ ನಟಿಸಿಕೊಳ್ಳೋದಕ್ಕೆ ಆಯೋಜಕರು, ನಿರ್ಮಾಪಕರು ಬಳಿಸಿಕೊಂಡಿದ್ದೇ ಆದಲ್ಲಿ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು