ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ.

ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯುಂಟಾಗಿ ಕೆಲಸವೇ ಇಲ್ಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ, ಅಭಿವೃದ್ಧಿ ಕಾರ್ಯಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.