Bengaluru 22°C
Ad

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೆ 350 ಕೋಟಿ ಸಾವಿರ ಕೋಟಿ ರೂ. ಮಂಜೂರು: ಜೋಶಿ

ನವಲಗುಂದ ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 52ಕ್ಕೆ 12 ಕಿಲೋಮೀಟರ್ ಉದ್ದದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 350 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.

ಹುಬ್ಬಳ್ಳಿ: ನವಲಗುಂದ ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 52ಕ್ಕೆ 12 ಕಿಲೋಮೀಟರ್ ಉದ್ದದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 350 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರೊಂದಿಗೆ ಇನ್ನೂ ಎರಡು ರಸ್ತೆಗಳ ಕಾಮಗಾರಿಗಾಗಿ ಅನುದಾನ ಮಂಜೂರು ಮಾಡಲಾಗಿದೆ. ಈ ಅನುದಾನ ಮಂಜೂರು ಮಾಡಿದ ಕೇಂದ್ರ ಸರಕಾರ ಹಾಗೂ ಪ್ರಧಾನ ಮಂತ್ರಿನರೇಂದ್ರ ಮೋದಿಗೆ ಕೇಂದ್ರ ಸಚಿವ ಜೋಶಿ ಧನ್ಯವಾದ ತಿಳಿಸಿದ್ದಾರೆ.

Ad
300x250 2

ನವಲಗುಂದ ಬೈಪಾಸ್ ಸೇರಿ ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವರ್ತುಳದಿಂದ ಬೆಂಗಳೂರು ಮಾರ್ಗದಲ್ಲಿ ಬಂಕಾಪುರ ಚೌಕ್ ಬಿಡ್ನಾಳ ಕ್ರಾಸ್‌ವರೆಗೆ ವಿಸ್ತರಿಸುವ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯ ವಿಸ್ತ್ರತ ಯೋಜನಾ ವರದಿ ತಯಾರಿಗಾಗಿ 25 ಲಕ್ಷ ಮಂಜೂರು ಮಾಡಲಾಗಿದೆ. ಹಾಗೂ ಕುಸುಗಲ್‌ನಿಂದ ನರೇಂದ್ರ ಕ್ರಾಸ್ ವರೆಗಿನ ವರ್ತುಳ ರಸ್ತೆಯ ಕಾಮಗಾರಿಯ ವಿಸ್ತ್ರತ ಯೋಜನಾ ವರದಿ ತಯಾರಿಗಾಗಿ 41 ಲಕ್ಷ ರೂಪಾಯಿಗಳನ್ನು ಕೂಡಾ ತೆಗೆದಿರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಒಟ್ಟು ರಾಜ್ಯದ ಒಟ್ಟು 470 ಕಿಲೋಮೀಟರ್ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ជ໖ 2024-250 មដ 8006 ಕೋಟಿ ರೂಪಾಯಿ ಮಂಜೂರು ಮಾಡಿದೆ. ಇದರಲ್ಲಿ ಧಾರವಾಡ ಜಿಲ್ಲೆಗೆ ಮೂರು ಯೋಜನೆಗಳೂ ಸೇರಿವೆ. ಕೂಡಲೇ ಡಿ.ಪಿ.ಆ‌ರ್. ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ ಎಂದು ಜೋಶಿ ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad