ಧರ್ಮಸ್ಥಳ : ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ಎಸ್.ನಾಯರ್ (22) ಎಂದು ಗುರುತಿಸಲಾಗಿದೆ. ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿರುವ ಆಕಾಂಕ್ಷಾ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಸರ್ಟಿಫಿಕೇಟ್ ತರಲೆಂದು ಹೋಗಿದ್ದರು.

ಅಷ್ಟೇ ಅಲ್ಲದೆ, ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತಳ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.