ಧಾರವಾಡ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಮಗುವನ್ನು ನಗರದ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿರುವ ಗೋಪಾಲ ಲಮಾಣಿ ಎಂಬವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ಮಗು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಇದರಿಂದ ಮಗುವನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ 5 ತಿಂಗಳ ಮಗು ಸಾವನ್ನಪ್ಪಿದೆ ಎಂಬ ಮಾಹಿತಿ ತಿಳಿದು ಬಂದಿದೆ.

