Bengaluru 22°C
Ad

ಮಕ್ಕಳನ್ನು ಕರೆದೊಯ್ಯುವ ವೇಳೆ ಸ್ಕೂಲ್​ ಬಸ್​​ ಎಂಜಿನ್​ನಲ್ಲಿ ಬೆಂಕಿ

ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಧಾರವಾಡ: ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ನವಲೂರು ಬಳಿಯ ಖಾಸಗಿ ಶಾಲಾ ವಾಹನ ಇದಾಗಿದ್ದು, ಮಕ್ಕಳನ್ನು ಕರೆದುಕೊಂಡು ಶಾಲೆಗೆ ಹೋಗುವಾಗ ವಾಹನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಮಕ್ಕಳು ವಾಹನದಲ್ಲಿದ್ದ ಕಾರಣ ಎಲ್ಲರನ್ನು ಕೆಳಗಿಸಿದ ಚಾಲಕ ಜಾಗರೂಕತೆ ಮೆರೆದಿದ್ದಾರೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad
Ad
Nk Channel Final 21 09 2023
Ad