Ad

ಕಳುವಾಗಿದ್ದ ಹಿಟಾಚಿ ಕಂಪೆನಿಯ ವಸ್ತುಗಳ ಜಪ್ತಿ : ತಂಡಕ್ಕೆ ಬಹುಮಾನ ಘೋಷಣೆ

ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಟಾಟಾ ಹಿಟಾಚಿ ಕಂಪೆನಿಯಲ್ಲಿ ಕಳ್ಳತನವಾಗಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಬ್ಯಾಟರಿ, ಟೈರ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಧಾರವಾಡ: ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಟಾಟಾ ಹಿಟಾಚಿ ಕಂಪೆನಿಯಲ್ಲಿ ಕಳ್ಳತನವಾಗಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಬ್ಯಾಟರಿ, ಟೈರ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆರೋಪಿಗಳನ್ನು ಪತ್ತೆ ಮಾಡಿದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದಾರೆ.

Ad
300x250 2

ಹಿಟಾಚಿ ಕಂಪೆನಿಯಲ್ಲೇ ಕೆಲಸ ಮಾಡುತ್ತಿದ್ದ ಓರ್ವ ಕಾರ್ಮಿಕ ತನ್ನ ಇಬ್ಬರು ಸಹಚರರೊಂದಿಗೆ ಕಂಪೆನಿಯಲ್ಲಿನ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಗರಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕೆಲವೇ ದಿನಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

Ad
Ad
Nk Channel Final 21 09 2023
Ad