ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯಲಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮಾತನಾಡಿ, ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಆರೋಪ ಮಾಡಿದರು. ಕಾಂಗ್ರೆಸ್​ನವರಿಗೆ ಕೋರ್ಟ್​​ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ.

ಕಾಂಗ್ರೆಸ್​ನವರು ಹೆಚ್​ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್​ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದೀರಿ, ಇವಾಗ ನಿಮಗೆ ಜ್ಞಾನೋದಯ ಆಯ್ತಾ‌ ಎಂದು ವಾಗ್ದಾಳಿ ಮಾಡಿದರು. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.