ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಲಾಗಿದ್ದು, ಕೆಲ ಫೋಟೋಗಳು ಲೀಕ್ ಆಗಿವೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ. ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೇ ಸರ್ಕಾರ ಎಂದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿರುವ ಜೋಶಿ, ಈಗಲೂ ಸಹ ಕ್ರೂರವಾಗಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು .ಇದರಲ್ಲಿ ಯಾವ ಅನುಮಾನ ಇಲ್ಲ. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರೋದು ಅಕ್ಷಮ್ಯ ಅಪರಾಧ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು. ವಿಷಯ ಡೈವರ್ಟ್ ಮಾಡುವುದಕ್ಕೆ ರಾಜ್ಯ ಸರ್ಕಾರ ಈ ತರಹ ಮಾಡುತ್ತಿದೆ ಎಂದು ಆರೋಪಿಸಿದರು.
Ad