ಧಾರವಾಡ : ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಇನಾಯಾ (3), ಕೈಫ್ (7), ಅಮಿನಾ (26), ಇಸ್ಮಾಯಿಲ್ (35), ಜರಿನಾ (65) ಮಹಿರಾನ್ (13) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಕ್ಷಣ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆಯ ಮೇಲ್ಛಾವಣಿಯ ತಗಡುಗಳು ಹಾರಿ ಹೋಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.

