ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತು ಬಲಿಯಾಗಿದ್ದು, ಓರ್ವ ರೈತನಿಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿದ್ದ ವೇಳೆ ಬಸ್ ಚಾಲಕ ರೀಲ್ಸ್ ಮಾಡಲು ಶುರು ಮಾಡಿದ್ದಾನೆ. ಇದೇ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಚಕ್ಕಡಿಯನ್ನು ಗಮನಿಸಿದೆ ರೀಲ್ಸ್ ಗುಂಗಿನಲ್ಲಿದ್ದ ಚಾಲಕ, ಹಿಂಬದಿಯಿಂದ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದಾನೆ.
ಬಸ್ ಡಿಕ್ಕಿಯಾದ ರಭಸಕ್ಕೆ ಎರಡು ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ. ಇತ್ತ ರೈತನಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. KSRTC ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಇದೀಗ ಬಡ ಕುಟುಂಬ ಬೀದಿಗೆ ಬಂದಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ರೈತ ಮಂಜುನಾಥ್ ರಂಗಪ್ಪ ಹೆಗ್ಗಣ್ಣವರ ಅವರ ಮೆದಳು ನಿಷ್ಕ್ರೀಯವಾಗಿದೆ. ಅಪಘಾತವಾದಗಿಂದ ಮಾತನಾಡದ ರೈತ ಮಂಜುನಾಥ, ಮೆದುಳಿನಲ್ಲಿ ಬ್ಲಡ್ ಬ್ಲಾಕ್ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಪ್ರಕರಣ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

