Ad

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಸಿಐಡಿ

Neha

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟ್ ಗೆ 483 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Ad
300x250 2

ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಮಾಡಲಾಗಿತ್ತು. ಫಯಾಜ್ ಎಂಬಾತ ನೇಹಾಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ನೇಹಾ ಹಿರೇಮಠ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆದಿತ್ತು. ಇದೀಗ ಸಿಐಡಿ ಪೋಲೀಸರು 483 ಪುಟಗಳಷ್ಟು ಚಾರ್ಜ್ ಶೀಟ್ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸದ್ಯ ಆರೋಪಿ ಫಯಾಜ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

 

Ad
Ad
Nk Channel Final 21 09 2023
Ad